ಪ್ರಚಲಿತ ವಿದ್ಯಮಾನ

ಅತ್ತಿಬೆಲೆ: ರಸ್ತೆ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ

ಆನೇಕಲ್‍ನ ಉಪವಿಭಾಗದ ಅತ್ತಿಬೆಲೆ ಪೊಲೀಸರು ಇಂದು ಅತ್ತಿಬೆಲೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹವನ್ನ ಹಮ್ಮಿಕೊಳ್ಳಲಾಗಿತ್ತು. ಬೆಂ. ಗ್ರಾಮಾಂತರ ಎಸ್.ಪಿ ಭೀಮಾ ಶಂಕರ್ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವ ಜೊತೆಗೆ ವಾಹನ ಸವಾರರಿಗೆ ಗುಲಾಭಿ ನೀಡಿ ಸಂಚಾರಿ ನಿಯಮಗಳನ್ನ ಪಾಲಿಸುವಂತೆ ಅರಿವು ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಎಸ್ .ಪಿ ಭೀಮಾಶಂಕರ್ ಪ್ರತಿ ವರ್ಷ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕೆಲಸವನ್ನ ಪೊಲೀಸ್ ಇಲಾಖೆ ಮಾಡುತ್ತಿದೆ ಅದರಂತೆ ಅತ್ತಿಬೆಲೆಯಲ್ಲಿ ಇಂದು ಶಾಲಾ ಮಕ್ಕಳ ಜೊತೆಗೂಡಿ ಈ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆನೇಕಲ್ ಉಪ ವಿಭಾಗದ ಡಿವೈಎಸ್‍ಪಿ ಉಮೇಶ್, ಅತ್ತಿಬೆಲೆ ಇನ್ಸ್‍ಪೆಕ್ಟರ್ ರಾಜೇಶ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅತ್ತಿಬೆಲೆ ಸರ್ಕಲ್‍ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಹಿನ್ನೆಲೆಯಲ್ಲಿ ರಸ್ತೆಯ ಅಗಲೀಕರಣ ಮಾಡಿ ಇಂದು ರಸ್ತೆಯನ್ನ ಲೋಕಾರ್ಪಣೆ ಮಾಡಲಾಗಿದೆ. 

Leave a Reply

Your email address will not be published. Required fields are marked *