ಪ್ರಚಲಿತ ವಿದ್ಯಮಾನ

ಆನೇಕಲ್: ಬಹು ಜನ ಸಮಾಜವಾದಿ ಪಾರ್ಟಿ ಅಭ್ಯರ್ಥಿ ಬಿರುಸಿನ ಪ್ರಚಾರ

 ಆನೇಕಲ್:

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಹು ಜನ ಸಮಾಜವಾದಿ ಪಾರ್ಟಿಯ ಅಭ್ಯರ್ಥಿ ಡಾ. ವೈ.ಚಿನ್ನಪ್ಪ ಚಿಕ್ಕಹಾಗಡೆ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಇಂದು ಚಂದಾಪುರ ಸುತ್ತಮುತ್ತ ಮತದಾರರ ಬಳಿ ಮತಯಾಚನೆ ಮಾಡಿದ ಚಿನ್ನಪ್ಪ ರವರು ಈ ಬಾರಿ ಬಹುಜನ ಸಮಾಜವಾದಿ ಪಾರ್ಟಿ ಗೆ ಮತ ಹಾಕಬೇಕೆಂದು ಜನರಲ್ಲಿ ಮನವಿ ಮಾಡಿದರು.

ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಿ.ಕೆ. ಸುರೇಶ್ ರವರು ಇಲ್ಲಿಯವರೆಗೂ ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿಲ್ಲ. ಹಾಗಾಗಿ ಮತದಾರರು ಈ ಬಾರಿ   ಬಹು ಜನ ಸಮಾಜವಾದಿ ಪಾರ್ಟಿಯನ ಬೆಂಬಲಿಸಿ ಜನಸೇವೆ ಮಾಡಲು ತಮಗೆ ಅವಕಾಶ ನೀಡಬೇಕೆಂದು ಮತದಾರರಲ್ಲಿ ಪ್ರಾರ್ಥಿಸಿದರು.

Leave a Reply

Your email address will not be published. Required fields are marked *