ಪ್ರಚಲಿತ ವಿದ್ಯಮಾನ

ಆನೇಕಲ್: ಲೋಕಸಭೆ ಚುನಾವಣೆಗೆ ಸಿದ್ದತೆ

ಲೋಕಸಭೆ ಚುನಾವಣೆಗೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಯ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಚುನಾವಣೆಗೆ ಎಲ್ಲಾ ರೀತಿ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ, ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ಮಸ್ಟರಿಂಗ್ ಸೆಂಟರ್ ನಿರ್ಮಾಣ ಮಾಡಲಾಗಿದ್ದು ತಾಲ್ಲೂಕಿನ 368 ಮತಗಟ್ಟೆಗಳಿಗೆ ಇಲ್ಲಿಂದಲೇ ವಿದ್ಯುನ್ಮಾನ ಮತಯಂತ್ರವನ್ನ ಕಳುಹಿಸಿಕೊಡಲಾಗುತ್ತಿದೆ. ಚುನಾವಣೆಗಾಗಿ ತಾಲ್ಲೂಕಿನಲ್ಲಿ 2 ಸಾವಿರ ಸಿಬ್ಬಂದಿಗಳನ್ನ ನಿಯೋಜನೆ ಮಾಡಲಾಗಿದೆ.
ಎಂದು ಸಹಾಯಕ ಚುನಾವಣಾ ಅಧಿಕಾರಿ ಮದನ್ ಮೋಹನ್ ತಿಳಿಸಿದರು.
ಚುನಾವಣೆಗಾಗಿ ಆನೇಕಲ್ ಕ್ಷೇತ್ರದಲ್ಲಿ ಒಟ್ಟು 368 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದ್ದು ,ಇವುಗಳಲ್ಲಿ 62 ಸೂಕ್ಷ್ಮ ಹಾಗೂ 4 ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ಈಗಾಗಲೇ ಗುರುತಿಸಲಾಗಿದೆ. ಅಲ್ಲದೇ 2 ಸಖಿ ಮತಗಟೆಗಳನ್ನ ಸಹ ಈ ಭಾಗದಲ್ಲಿ ತೆರಲಾಗಿದೆ. ಭದ್ರತೆಗಾಗಿ 850 ಪೊಲೀಸ್ ಸಿಬ್ಬಂದಿಗಳನ್ನ ನಿಯೋಜನೆ ಮಾಡಲಾಗಿದೆ,. ಯಾವುದೇ ಅಹಿತಕ ಘಟನೆ ನಡೆಯದಂತೆ ಎಲ್ಲಾ ರೀತಿಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಂದು ಅಧಿಕಾರಿಗಳು ತಿಳಿಸಿದರು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ಎಲ್ಲಾ ಕಡೆಗಳಲ್ಲಿ ಚುನಾವಣಾ ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣು ಇಡಲಾಗಿದೆ. ಇದಲ್ಲದೇ ತಾಲ್ಲೂಕಿಗೆ ಬರುವ ಪ್ರಮುಖ 6 ಮುಖ್ಯರಸ್ತೆಗಳಲ್ಲಿ ಚೆಕ್‍ಪೊಸ್ಟ್‍ಗಳನ್ನ ಸ್ಥಾಪನೆ ಮಾಡಲಾಗಿದ್ದು ಎಲ್ಲಾ ರೀತಿಯ ಕ್ರಮಗಳನ್ನ ಕೈಗೊಂಡಿರುವುದಾಗಿ ಸಹಾಯಕ ಚುನಾವಣಾ ಅಧಿಕಾರಿಗಳು ತಿಳಿಸಿದರು..

Leave a Reply

Your email address will not be published. Required fields are marked *