ಪ್ರಚಲಿತ ವಿದ್ಯಮಾನ

ಜಿಗಣಿಯಲ್ಲಿ ಡಿ ಕೆ ಸುರೇಶ್ ಪರ ಮನೆ ಮನೆ ತೆರಳಿ ಪ್ರಚಾರ

ಜಿಗಣಿ ; ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಇರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಕೊನೆ ಕ್ಷಣದ ಕಸರತ್ತನ್ನ ಮುಂದುವರೆಸಿವೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು. ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಯ ಜಿಗಣಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು. ಜಿಗಣಿ ಕೈಗಾರಿಕಾ ಪ್ರದೇಶ ಹಾಗೂ ಗ್ರಾನೈಟ್ ಅಂಗಡಿಗಳಲ್ಲಿ ಡಿಕೆ ಸುರೇಶ್ ಪರವಾಗಿ ಕಾರ್ಯಕರ್ತರು ಮತಯಾಚನೆ ಮಾಡಿದರು. ಜಿಗಣಿ ಆರ್. ಪುನೀತ್, ಜಿಗಣಿ ಪುರಸಭಾ ಸದಸ್ಯರಾದ ಸಂಪಂಗಿ ರಾಜು , ಪ್ರಹ್ಲಾದ್ ರೆಡ್ಡಿಆನಂದ್ ಗೌಡಫ್ಯಾನ್ಸಿ ರಮೇಶ್ ಸೇರಿದಂತೆ ಹಲವು ಮುಖಂಡರು ಮನೆ ಮನೆಗೆ ತೆರಳಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು.

 

Leave a Reply

Your email address will not be published. Required fields are marked *