ಪ್ರಚಲಿತ ವಿದ್ಯಮಾನ

ಭ್ರಷ್ಟಾಚಾರ ಕಂಡು ಬಂದರೆ ದೂರು ನೀಡಿ; ಎಸಿಬಿ ಅಧಿಕಾರಿಗಳಿಂದ ಜನರಿಗೆ ಜಾಗೃತಿ

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೆನ್ನಾಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸಾರ್ವಜನಿಕ ಸಭೆಯನ್ನ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ರೈತರು, ಕಾರ್ಮಿಕರು, ಸಾರ್ವಜನಿಕರು ಸೇರಿದಂತೆ ಹಲವು ಮಂದಿ ಭಾಗವಹಿಸಿ ಅಧಿಕಾರಿಗಳಿಂದ ಉಪಯುಕ್ತ ಮಾಹಿತಿ ಪಡೆದುಕೊಂಡರು. 1988 ರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಯಾವುದೇ ಸಾರ್ವಜನಿಕ ಕೆಲಸಗಳಿಗೆ, ಸರ್ಕಾರಿ ಅಧಿಕಾರಿಗಳು ಹಣವನ್ನ ಒತ್ತಾಯಿಸುವುದು, ಲಂಚದ ರೂಪದಲ್ಲಿ ಬೇರೆ ಪ್ರತಿಫಲ ಪಡೆಯುವುದು ಶಿಕ್ಷಾರ್ಹ ಅಪರಾದ, ಈ ರೀತಿ ತಮ್ಮ ಹುದ್ದೆಯನ್ನ ಬಳಸಿಕೊಂಡು ಇನ್ನಿತರ ಅವ್ಯವಹಾರಗಳು ಮಾಡುತ್ತಿರುವುದು ನಿಮ್ಮ ಗಮನಕ್ಕೆ ಕಂಡು ಬಂದರೆ ಕೂಡಲೇ ಭ್ರಷ್ಟಚಾರ ನಿಗ್ರಹ ದಳಕ್ಕೆ ದೂರು ನೀಡುವ ಮೂಲಕ ಇಂತಹ ಭ್ರಷ್ಟಾಚಾರ ಕೃತ್ಯಕ್ಕೆ ಕಡಿವಾಣ ಹಾಕಬಹುದು ಎಂದು ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಿದರು. ಗ್ರಾಮಾಂತರ ಭಾಗದ ಹಲವು ಕಡೆ ಜನರಿಗೆ ಈ ಭ್ರಷ್ಟಾಚಾರ ನಿಗ್ರಹ ದಳದ ಬಗ್ಗೆ ಸೂಕ್ತ ಮಾಹಿತಿ ಇಲ್ಲ ಹೀಗಾಗಿ ಎಲ್ಲಾ ಕಡೆಗಳಲ್ಲೂ ಸಾರ್ವಜನಿಕ ಸಭೆ ನಡೆಸುವ ಮೂಲಕ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲಾ ಕಡೆಗಳಲ್ಲಿ ಸಾರ್ವಜನಿಕ ಸಭೆಗಳನ್ನ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು. ಕೆವಲ ಸರ್ಕಾರಿ ಅಧಿಕಾರಿಗಳು ಮಾತ್ರವಲ್ಲದೇ ಸರ್ಕಾರಿ ಅನುಧಾನ ಪಡೆಯುವ ಯಾವುದೇ ಸಂಸ್ಥೆ ಜನರಿಂದ ಹಣದ ಬೇಡಿಕೆ ಇಟ್ಟರೆ ಅವರ ವಿರುದ್ದ ದೂರು ನೀಡಬಹುದು ಎಂದು ಜನರಿಗೆ ಅರಿವು ಮೂಡಿಸಿದರು. ಎಸಿಬಿ ಇನ್ಸ್‍ಪೆಕ್ಟರ್ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,.

Leave a Reply

Your email address will not be published. Required fields are marked *