ಪ್ರಚಲಿತ ವಿದ್ಯಮಾನ

ಶಾಲೆಗಳಲ್ಲಿ ವ್ಯಸನಮುಕ್ತ ಜೀವನ ಪಾಠ

ವಿಜಯಪುರ: ಮದ್ಯಪಾನ ಸೇರಿದಂತೆ ಎಲ್ಲ ರೀತಿಯ ವ್ಯಸನಗಳಿಂದ ಜನರನ್ನು ಮುಕ್ತಗೊಳಿಸಲು ಶಾಲೆಗಳಲ್ಲಿ ಮದ್ಯಪಾನ ಸೇರಿದಂತೆ ಇತರೆ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಎಚ್‌.ಸಿ. ರುದ್ರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಮದ್ಯಪಾನ ಹಾಗೂ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ರಾಜ್ಯದ 30 ಜಿಲ್ಲೆಗಳ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘಟನೆಗಳ ಮಹಿಳೆಯರು, ಶಾಲಾ- ಕಾಲೇಜುಗಳಲ್ಲಿ ಮಕ್ಕಳಲ್ಲಿ ವ್ಯಸನಯುಕ್ತ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಇದಕ್ಕಾಗಿ ವಿಚಾರ ಸಂಕಿರಣ, ಚರ್ಚಾ ಸ್ಪರ್ಧೆ, ಹೆದ್ದಾರಿ ಫಲಕ, ಬೀದಿ ನಾಟಕ ಹೀಗೆ ವಿವಿಧ ರೀತಿಯ ಪ್ರಚಾರ ಮಾಧ್ಯಮ ಬಳಸಿಕೊಂಡು ಜಾಗೃತಿ ಮೂಡಿಸಲು ಯೋಜಿಸಿದ್ದು, ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.

ರಾಜ್ಯ ಸರಕಾರ ಸಮಾಜದಲ್ಲಿ ಮದ್ಯಪಾನ ನಿಯಂತ್ರಿಸುವ ನಿಟ್ಟಿನಲ್ಲಿ ಮದ್ಯಪಾನ ಸಂಯಮ ಮಂಡಳಿ ರಚಿಸಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸುತ್ತ ಬರುತ್ತಿದೆ. ಆದರೂ ಸಮಾಜದಲ್ಲಿ ಜಾಗೃತಿ ಮೂಡಿಲ್ಲ. ಹೀಗಾಗಿ ಗ್ರಾಮೀಣ ಮಟ್ಟದಲ್ಲಿಯೇ ಮದ್ಯಪಾನದ ದುಷ್ಪರಿಣಾಮದ ಬಗ್ಗೆ ಜಾಗೃತಿ
ಮೂಡಿಸಬೇಕಿದೆ. ಗ್ರಾಪಂ ಮಟ್ಟದಲ್ಲಿ ಗ್ರಾಮಸಭೆ ನಡೆದ ಸಂದರ್ಭದಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು.

ಸಮಾಜದಲ್ಲಿ ಬಾಲ್ಯದಲ್ಲಿಯೆ ಮಕ್ಕಳಿಗೆ ಈ ಕುರಿತು ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಂದ
ಸೂಕ್ತ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ. ವಿಶೇಷವಾಗಿ ಶಾಲಾ ಮಕ್ಕಳಿಗಾಗಿ ಮದ್ಯಪಾನ ದುಷ್ಪರಿಣಾಮಗಳ ಬಗ್ಗೆ ಒಂದು ಗಂಟೆ ಕಾಲ ವಿಶೇಷ ತರಗತಿ ಆಯೋಜಿಸುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದರು.

ಮದ್ಯಪಾನದಿಂದಾಗುವ ದುಷ್ಪರಿ ಣಾಮಗಳ ಕುರಿತು ಜಾಗೃತಿ ಮೂಡಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಸಮಾಜ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ಅಬಕಾರಿ, ಪೊಲೀಸ್‌ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಮದ್ಯಪಾನ ಸಂಯಮ ಮಂಡಳಿ ನಿರ್ದೇಶಕ ಸೈಯ್ಯದ ಅಲ್ಲಾಭಕ್ಷ, ಡಾ| ಎಚ್‌.ಬಿ. ಬೂದೆಪ್ಪ, ಸಿರಾಜ್‌ ಜಮಖಂಡಿ ಇದ್ದರು

Leave a Reply

Your email address will not be published. Required fields are marked *